ಅಂತಾರಾಷ್ಟ್ರೀಯ

ಆಫ್ಘಾನಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ತ್ರಿವಳಿ ಸ್ಫೋಟ, ಕನಿಷ್ಛ 5 ಮಂದಿ ಸಾವು

ಕಾಬುಲ್: (ಸೀಧಿಬಾತ್ ನ್ಯೂಸ್ ಸರ್ವಿಸ್)ನೆರೆಯ ಆಫ್ಘಾನಿಸ್ತಾನದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ರಾಜಧಾನಿ ಕಾಬುಲ್ ನಲ್ಲಿ ಸಂಭವಿಸಿದ ತ್ರಿವಳಿ ಸ್ಫೋಟದಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಆಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನ ಮಕ್ರೋರಯಾನ್ ಪ್ರಾಂತ್ಯದಲ್ಲಿರುವ ಗಣಿಗಾರಿಕೆ ಮತ್ತು ಪೆಟ್ರೋಲಿಯಂ ಸಚಿವಾಲಯವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು, ಸತತ ಮೂರು ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸ್ಫೋಟದಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಆಫ್ಘಾನಿಸ್ತಾನದ ಆಂತರಿಕ ಸಚಿವಾಲಯ ಕೂಡ ಸ್ಪಷ್ಟನೆ ನೀಡಿದ್ದು ಇಂದು ನಡೆದ ಆತ್ಮಹತ್ಯಾ ದಾಳಿಯಲ್ಲಿ ಕನಿಷ್ಠ 5 ಮಂದಿ ಸಾವಿಗೀಡಾಗಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ಉಗ್ರರು ಈ ದಾಳಿ ನಡೆಸಿದ್ದಾರೆ. ಗಣಿಗಾರಿಕೆ ಮತ್ತು ಪೆಟ್ರೋಲಿಯಂ ಸಚಿವಾಲಯವೇ ಉಗ್ರ ಟಾರ್ಗೆಟ್ ಆಗಿರುವ ಶಂಕೆ ಇದೆ ಎಂದು ಮಾಹಿತಿ ನೀಡಿದೆ.
source:-kannadaprabha
https://www.youtube.com/watch?v=pdh_H9v9qrI
https://www.youtube.com/watch?v=n8NV6stZzEQ&t=3s

ಸಂಬಂಧಿತ ಪೋಸ್ಟ್ಗಳು

ಅಫ್ಘಾನಿಸ್ತಾನ ದಾಳಿ : 20 ಉಗ್ರರ ಹತ್ಯೆ

Ansar Aziz Nadwi

ಮೊದಲು ಅಣ್ವಸ್ತ್ರ ಬಳಕೆ ಮಾಡಲ್ಲ ಎಂಬ ನಿಯಮವೇನೂ ಇಲ್ಲ: ಪಾಕ್ ಸೇನೆಯ ಉದ್ಧಟತನ

Ansar Aziz Nadwi

ಹಾಲೆಪ್‌ಗೆ ಚೊಚ್ಚಲ ವಿಂಬಲ್ಡನ್‌ ಕಿರೀಟ

Ansar Aziz Nadwi

ಒಂದು ಕಾಮೆಂಟ್ ಬಿಡಿ

ವಿಮರ್ಶೆ ಬಿಡಿ