ರಾಷ್ಟ್ರೀಯ ರಾಷ್ಟ್ರೀಯ ಸುದ್ದಿ

ಎನ್ ಡಿಎ ಸರ್ಕಾರ ಸಾವರ್ಕರ್ ಬದಲಿಗೆ ಗೋಡ್ಸೆಗೆ ಭಾರತ ರತ್ನ ನೀಡಬೇಕು: ಮನೀಶ್ ತಿವಾರಿ

ನಾಗ್ಪುರ:(ಸೀಧಿಬಾತ್ ನ್ಯೂಸ್ ಸರ್ವಿಸ್) ಮುಂಬರುವ ಮಹಾರಾಷ್ಟ್ರ ಚುನಾವಣೆಯಲ್ಲಿ ವೀರ್ ಸಾವರ್ಕರ್ ಗೆ ಭಾರತ ರತ್ನ ನೀಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿಕೊಂಡಿದ್ದ  ಬಿಜೆಪಿಯ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ನಾಯಕ ಮನೀಷ್ ತಿವಾರಿ ನಾಥುರಾಮ್ ಗೋಡ್ಸೆಗೂ  ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಎಂದು ವ್ಯಂಗ್ಯವಾಡಿದ್ದಾರೆ.

ಸಾವರ್ಕರ್ ಗಾಂಧೀಜಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆ ಎಂಬ ಆರೋಪವಿದೆ. ಆದರೇ ನಾಥೂರಾಮ್ ಗೋಡ್ಸೆ ಗಾಂಧೀಜಿಯನ್ನು ಗುಂಡಿಕ್ಕಿ ಹತ್ಯೆಗೈದಿದ್ದರು.  ಈ ವರ್ಷ ಗಾಂಧೀಜಿಯವರ 150 ನೇ ಜನ್ಮ ವರ್ಷಾಚರಣೆಯಿದೆ. ಆದ ಕಾರಣ ಎನ್ ಡಿ ಎ ಸರ್ಕಾರ ಭಾರತ ರತ್ನವನ್ನು ಸಾವರ್ಕರ್ ಬದಲಾಗಿ ಗೋಡ್ಸೆಗೆ ನೀಡಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ನಾಯಕ ರಷೀದ್ ಅಲ್ವಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಈ ಬಾರಿ ಸಾವರ್ಕರ್ ಹೆಸರು ಭಾರತ ರತ್ನ ಪಟ್ಟಿಯಲ್ಲಿದ್ದು ಮುಂದಿನ ಹೆಸರು ನಾಥೂರಾಮ್ ಗೋಡ್ಸೆಯದ್ದು ಎಂದು ಈಗಲೇ ಖಚಿತವಾಗಿದೆ. ಪ್ರತಿಯೊಬ್ಬರಿಗೂ ಸಾವರ್ಕರ್ ಇತಿಹಾಸ ತಿಳಿದಿದ್ದು ಗಾಂಧಿ ಹತ್ಯೆಗೆ ಸಂಚು ರೂಪಿಸಿದವರಲ್ಲಿ ಪ್ರಮುಖರು. ಇದಕ್ಕೆ ಸಾಕಷ್ಟು ಸಾಕ್ಷ್ಯಗಳಿವೆ.  ಮುಂದಿನ ಬಾರಿ ಗೊಡ್ಸೆಗೆ ಬಿಜೆಪಿ ಸರ್ಕಾರ ಭಾರತ ರತ್ನ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿಗೆ ಬಿಜೆಪಿ ಕಾರ್ಯನಿರತ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೆಂದ್ರ ಫಢ್ನವೀಸ್ ಮುಂಬರುವ  ರಾಜ್ಯ ಚುನಾವಣಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದರು.

Source:-udayavani

ಸಂಬಂಧಿತ ಪೋಸ್ಟ್ಗಳು

ಕೈಲಾಸ ಮಾನಸ ಸರೋವರ ಯಾತ್ರಾರ್ಥಿಗಳಿಗೆ ವೀಸಾ ನೀಡಿದ ಚೀನಾ

Ansar Aziz Nadwi

ಹುಲಿರಾಯ ಪಲ್ಲಂಗದ ಮೇಲೆ ದಣಿವಾರಿಸಿಕೊಂಡ

Ansar Aziz Nadwi

ಜ.8ಕ್ಕೆ ಕಾರ್ಮಿಕ ಸಂಘಟನೆಗಳಿಂದ ರಾಷ್ಟ್ರವ್ಯಾಪಿ ಮುಷ್ಕರ

Ansar Aziz Nadwi

ಒಂದು ಕಾಮೆಂಟ್ ಬಿಡಿ

ವಿಮರ್ಶೆ ಬಿಡಿ