ರಾಷ್ಟ್ರೀಯ ರಾಷ್ಟ್ರೀಯ ಸುದ್ದಿ

ದಿಗ್ವಿಜಯ್ ಬದಲು ಸಂಸದೀಯ ಹಣಕಾಸು ಸ್ಥಾಯಿ ಸಮಿತಿಗೆ ಮನಮೋಹನ್ ಸಿಂಗ್ ನೇಮಕ

ನವದೆಹಲಿ:(ಸೀಧಿಬಾತ್ ನ್ಯೂಸ್ ಸರ್ವಿಸ್) ಮಾಜಿ ಪ್ರಧಾನಿ, ಹಿರಿಯ ಕಾಂಗ್ರೆಸ್ ಮುಖಂಡ ಡಾ.ಮನಮೋಹನ್ ಸಿಂಗ್ ಅವರನ್ನು ಸಂಸದೀಯ ಹಣಕಾಸು ಸ್ಥಾಯಿ ಸಮಿತಿಗೆ ದಿಗ್ವಿಜಯ್ ಸಿಂಗ್ ಬದಲಿಗೆ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರು ನಾಮನಿರ್ದೇಶನ ಮಾಡಿರುವುದಾಗಿ ವರದಿ ತಿಳಿಸಿದೆ.

ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು ರಾಜ್ಯಸಭೆಯ ಸಂಸದೀಯ ನಗರಾಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ರಾಜ್ಯಸಭಾ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ವಿವರಿಸಿದೆ.

ರಾಜ್ಯಸಭಾ ಅಧ್ಯಕ್ಷರಾದ ನಾಯ್ಡು ಅವರು, ಮನಮೋಹನ್ ಸಿಂಗ್ ಅವರನ್ನು ದಿಗ್ವಿಜಯ್ ಸಿಂಗ್ ಬದಲು ಸಂಸದೀಯ ಹಣಕಾಸು ಸ್ಥಾಯಿ ಸಮಿತಿ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ. ದಿಗ್ವಿಜಯ್ ಸಿಂಗ್ ಅವರು ಸಂಸದೀಯ ಹಣಕಾಸು ಸ್ಥಾಯಿ ಸಮಿತಿಗೆ ರಾಜೀನಾಮೆ ನೀಡುವ ಮೂಲಕ ಸಿಂಗ್ ಅವರ ನಾಮನಿರ್ದೇಶನಕ್ಕೆ ಅವಕಾಶ ಮಾಡಿಕೊಟ್ಟಿರುವುದಾಗಿ ವರದಿ ತಿಳಿಸಿದೆ.

1991ರಿಂದ 1996ರವರೆಗೆ ಮನಮೋಹನ್ ಸಿಂಗ್ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2014ರಿಂದ 2019ರ ಮೇವರೆಗೆ ಸಿಂಗ್ ಅವರು ರಾಜ್ಯಸಭಾದ ಸದಸ್ಯರಾಗಿದ್ದು, ಜೂನ್ ತಿಂಗಳಿನಲ್ಲಿ ಅವರ ಅವಧಿ ಮುಕ್ತಾಯಗೊಂಡಿತ್ತು. ಇದೀಗ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಮನಮೋಹನ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ.

Source:-udayavani

ಸಂಬಂಧಿತ ಪೋಸ್ಟ್ಗಳು

ಯುರೋಪ್‌ಗೆ ಡಾರ್ನಿಯರ್‌

Ansar Aziz Nadwi

ಅಪ್ರಾಪ್ತೆ ಮೇಲೆ 2 ದಿನ ಗ್ಯಾಂಗ್‍ರೇಪ್ ಎಸಗಿ ಮನೆಯ ಬಳಿ ಎಸೆದು ಹೋದ್ರು!

Ansar Aziz Nadwi

ಪೌರತ್ವ ಮಸೂದೆ: ಮೋದಿ ಸರಕಾರ ಗೆಲ್ಲಬಹುದೇ ರಾಜ್ಯಸಭಾ ಟೆಸ್ಟ್ ?

Ansar Aziz Nadwi

ಒಂದು ಕಾಮೆಂಟ್ ಬಿಡಿ

ವಿಮರ್ಶೆ ಬಿಡಿ