ಅಂತಾರಾಷ್ಟ್ರೀಯ

ಲಂಡನ್ ನಲ್ಲಿ ಮತ್ತೆ ಉಗ್ರ ದಾಳಿ; 2 ಸಾವು, ಶಸ್ತ್ರಧಾರಿ ಉಗ್ರನ ಹೊಡೆದುರುಳಿಸಿದ ಪೊಲೀಸರು!

ಲಂಡನ್:(ಸೀಧಿಬಾತ್ ನ್ಯೂಸ್ ಸರ್ವಿಸ್) ಲಂಡನ್ ನಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದು, ಶಸ್ತ್ರಧಾರಿ ಉಗ್ರನೋರ್ವ ಮನಸೋ ಇಚ್ಛೆ ಚಾಕು ಇರಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.

ಲಂಡನ್ ಬ್ರಿಡ್ಜ್ ಮೇಲೆ ಪಾದಾಚಾರಿಗಳನ್ನು ಗುರಿಯಾಗಿಸಿಕೊಂಡು ಉಗ್ರ ಈ ದಾಳಿ ನಡೆಸಿದ್ದು, ದಾಳಿಯಲ್ಲಿ ಸ್ಥಳದಲ್ಲೇ ಇಬ್ಬರು ಸಾರ್ವಜನಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಸ್ಕಾಟ್ಲೆಂಡ್ ಯಾರ್ಡ್ ಪೊಲೀಸರು ಕಾರ್ಯಾಚರಣೆ ನಡೆಸಿ ಶಸ್ತ್ರಧಾರಿ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಅಲ್ಲದೆ ಆತ ಆತ್ಮಹುತಿ ಬಾಂಬ್ ಅನ್ನು ಕಟ್ಟಿಕೊಂಡು ಆತ್ಮಾಹುತಿ ದಾಳಿಗೂ ಸಿದ್ಧನಾಗಿದ್ದ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ದಾಳಿಕೋರ ಶಂಕಿತ ಉಗ್ರ ಈ ಹಿಂದೆಯೂ ಕೂಡ ಇದೇ ರೀತಿಯ ಉಗ್ರ ದಾಳಿಯ ಆರೋಪಿಯಾಗಿದ್ದು, ಈತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು ಎಂದು ತಿಳಿದುಬಂದಿದೆ.

Source:-udayavani

ಸಂಬಂಧಿತ ಪೋಸ್ಟ್ಗಳು

ಆಫ್ಘಾನಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ತ್ರಿವಳಿ ಸ್ಫೋಟ, ಕನಿಷ್ಛ 5 ಮಂದಿ ಸಾವು

Ansar Aziz Nadwi

‘ವಿಶ್ವದ ಅತಿ ಶ್ರೀಮಂತ’ ಪಟ್ಟ ಕಳೆದುಕೊಂಡ ಅಮೆಜಾನ್ ಸ್ಥಾಪಕ ಜೆಫ್ ಬೆಜೋಸ್: ಮತ್ತೆ ಬಿಲ್ ಗೇಟ್ಸ್ ನಂಬರ್ 1

Ansar Aziz Nadwi

‘ಇನ್ನು ಸಹಿಸೋಕಾಗಲ್ಲ’: ಭಾರತದ ವಿರುದ್ಧ ಮತ್ತೆ ಗುಡುಗಿದ ಡೊನಾಲ್ಡ್ ಟ್ರಂಪ್

Ansar Aziz Nadwi

ಒಂದು ಕಾಮೆಂಟ್ ಬಿಡಿ

ವಿಮರ್ಶೆ ಬಿಡಿ