ಅಪರಾಧ ರಾಷ್ಟ್ರೀಯ ರಾಷ್ಟ್ರೀಯ ಸುದ್ದಿ

ಅಪ್ರಾಪ್ತೆ ಮೇಲೆ 2 ದಿನ ಗ್ಯಾಂಗ್‍ರೇಪ್ ಎಸಗಿ ಮನೆಯ ಬಳಿ ಎಸೆದು ಹೋದ್ರು!

ಭುವನೇಶ್ವರ:(ಸೀಧಿಬಾತ್ ನ್ಯೂಸ್ ಸರ್ವಿಸ್) ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಗಂಜಾಂ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿರುವ ಘಟನೆ ಒಡಿಶಾದ ಬೆರ್ಹಾಂಪುರ ಜಿಲ್ಲೆಯಲ್ಲಿ ನಡೆದಿದೆ.

ಜನಾರ್ಧನ್ ಬೆಹೆರಾ ಮತ್ತು ಮಿಥುನ್ ದಾಸ್ ಬಂಧಿತ ಆರೋಪಿಗಳು. ಜನವರಿ 10 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ನದಿಯ ಬಳಿ ಹೋಗುತ್ತಿದ್ದಾಗ ಆರೋಪಿಗಳಿಬ್ಬರು ಮಾತನಾಡಿಸಿದ್ದಾರೆ. ನಂತರ ಸಂತ್ರಸ್ತೆಯನ್ನು ಸ್ಕಾರ್ಫ್ ನಿಂದ ಕಟ್ಟಿ ಮತ್ತು ಬರುವ ಔಷಧಿಯನ್ನು ಮಿಕ್ಸ್ ಮಾಡಿರುವ ಜ್ಯೂಸ್ ಕುಡಿಯುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ತೆ ಜ್ಯೂಸ್ ಕುಡಿದ ನಂತರ ಪ್ರಜ್ಞೆ ತಪ್ಪಿದ್ದಾಳೆ. ಬಳಿಕ ಆರೋಪಿಗಳಿಬ್ಬರೂ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೆ ಸಂತ್ರಸ್ತೆಯನ್ನು ನಿರ್ಜನ ಪ್ರದೇಶದಲ್ಲಿ ಎರಡು ದಿನಗಳ ಕಾಲ ಇರಿಸಿಕೊಂಡು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಎರಡು ದಿನದ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಂತ್ರಸ್ತೆಯನ್ನು ಆಕೆಯ ಮನೆಯ ಬಳಿ ಎಸೆದು ಅಲ್ಲಿಂದ ಪರಾರಿಯಾಗಿದ್ದಾರೆ. ಸಂತ್ರಸ್ತೆಯನ್ನು ನೋಡಿದ ಕುಟುಂಬದವರು ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸರು ಐಪಿಸಿ ಮತ್ತು ಪೋಕ್ಸೋ ಕಾಯ್ದೆಯಡಿ ಆರೋಪಿಗಳಿಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

Source:-publictv

ಸಂಬಂಧಿತ ಪೋಸ್ಟ್ಗಳು

ಇಂಡಿಯಾ ಗೇಟ್‌ಗಿಂತ ಎತ್ತರದ ಕಟ್ಟಡ ನಿರ್ಮಾಣಕ್ಕೆ ಬ್ರೇಕ್‌

Ansar Aziz Nadwi

ಟಿ-20ಯಲ್ಲಿ ದಾಖಲೆ ಬರೆದ ಹಿಟ್‍ಮ್ಯಾನ್ ರೋಹಿತ್ ಶರ್ಮಾ

Ansar Aziz Nadwi

ಬಿಹಾರ ಶಾಸಕನ ಮನೆಯಲ್ಲಿ ಸಿಕ್ಕಿತು AK 47 ರೈಫಲ್!

Ansar Aziz Nadwi

ಒಂದು ಕಾಮೆಂಟ್ ಬಿಡಿ

ವಿಮರ್ಶೆ ಬಿಡಿ